Revelation 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರು ವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,
Kannada BSI Bible 2016
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -
Kannada Bible (KNCL) BSI 2016
“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ: