Revelation 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿ ಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.
Kannada BSI Bible 2016
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
Kannada BSI JV (ಕನ್ನಡ ಸತ್ಯವೇದವು J.V. (BSI))
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.
Kannada Bible (KNCL) BSI 2016
ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.