Revelation 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
Kannada BSI Bible 2016
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.
Kannada Bible (KNCL) BSI 2016
ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.