Revelation 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
Kannada BSI Bible 2016
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.
Kannada Bible (KNCL) BSI 2016
“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.