Revelation 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
Kannada BSI Bible 2016
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -
Kannada Bible (KNCL) BSI 2016
“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ: