Revelation 2:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.
Kannada BSI Bible 2016
ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಂಕಿಯ ಉರಿಯಂತಿರುವ ಕಣ್ಣುಗಳೂ ತಾಮ್ರದಂತಿರುವ ಪಾದಗಳೂ ಉಳ್ಳ ದೇವಕುಮಾರನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಪರೋಪಕಾರವನ್ನೂ ತಾಳ್ಮೆಯನ್ನೂ ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
Kannada Bible (KNCL) BSI 2016
ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ.