Revelation 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
Kannada BSI Bible 2016
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.
Kannada Bible (KNCL) BSI 2016
ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.