Revelation 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
Kannada BSI Bible 2016
ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಅವಳು ಹಾಸಿಗೆಯ ಮೇಲೆ ಬಿದ್ದುಕೊಂಡಿರುವಂತೆ ಮಾಡುವೆನು, ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಮನಸ್ಸನ್ನು ದೇವರ ಕಡಗೆ ತಿರುಗಿಸಿಕೊಂಡು ಅವಳ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
Kannada Bible (KNCL) BSI 2016
ಇಗೋ ನೋಡು, ಅವಳು ರೋಗದಿಂದ ಹಾಸಿಗೆ ಹಿಡಿಯುವಂತೆ ಮಾಡುತ್ತೇನೆ. ಅವಳೊಡನೆ ವ್ಯಭಿಚಾರ ಮಾಡುವವರು ಅವಳ ದುಷ್ಕೃತ್ಯಗಳನ್ನು ತ್ಯಜಿಸಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗದೆಹೋದರೆ, ಅವರು ಭೀಕರ ಕಷ್ಟನಷ್ಟಗಳಿಗೆ ಗುರಿಯಾಗುವಂತೆ ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.