Revelation 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
Kannada BSI Bible 2016
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.
Kannada Bible (KNCL) BSI 2016
ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.