Revelation 2:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.
Kannada BSI Bible 2016
ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ -
Kannada Bible (KNCL) BSI 2016
“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.