Revelation 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.
Kannada BSI Bible 2016
ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.
Kannada Bible (KNCL) BSI 2016
ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.