Revelation 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
Kannada BSI Bible 2016
ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿನ್ನಲ್ಲಿ ಒಳ್ಳೇದು ಒಂದುಂಟು, ಅದೇನಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನು ಸಹ ದ್ವೇಷಿಸುತ್ತಿ.
Kannada Bible (KNCL) BSI 2016
ಆದರೆ ನಿನ್ನಲ್ಲಿ ಒಂದು ಒಳ್ಳೆಯ ಗುಣವಿದೆ. ನಾನು ದ್ವೇಷಿಸುವಂತೆ ನೀನು ಸಹ ನಿಕೊಲಾಯಿತರ ದುಷ್ಕೃತ್ಯಗಳನ್ನು ದ್ವೇಷಿಸುತ್ತಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.