Revelation 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.
Kannada BSI Bible 2016
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.
Kannada Bible (KNCL) BSI 2016
ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.