Revelation 20:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
Kannada BSI Bible 2016
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.
Kannada Bible (KNCL) BSI 2016
ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.