Revelation 20:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
Kannada BSI Bible 2016
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.
Kannada Bible (KNCL) BSI 2016
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.