Revelation 20:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
Kannada BSI Bible 2016
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್‌ ಮಾಗೋಗ್‌ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
Kannada Bible (KNCL) BSI 2016
ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.