Revelation 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
Kannada BSI Bible 2016
ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಕಂಡೆನು. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಇಲ್ಲದೆ ಹೋದವು; ಇನ್ನು ಸಮುದ್ರವೂ ಇಲ್ಲ.
Kannada Bible (KNCL) BSI 2016
ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ” ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ.