Revelation 21:11 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.
Kannada BSI Bible 2016
ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
Kannada Bible (KNCL) BSI 2016
ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.