Revelation 21:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.
Kannada BSI Bible 2016
ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಪ್ರಾಕಾರವಿತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು; ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.
Kannada Bible (KNCL) BSI 2016
ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.