Revelation 21:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.
Kannada BSI Bible 2016
ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
Kannada Bible (KNCL) BSI 2016
ಆ ನಗರ ಚಚ್ಚೌಕವಾಗಿತ್ತು. ಅದರ ಚದರ ಅಳತೆ 2,400 ಕಿಲೊಮೀಟರುಗಳಷ್ಟಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು.