Revelation 21:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
Kannada BSI Bible 2016
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.
Kannada Bible (KNCL) BSI 2016
ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.