Revelation 21:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
Kannada BSI Bible 2016
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,
Kannada Bible (KNCL) BSI 2016
ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.