Revelation 21:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
Kannada BSI Bible 2016
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.
Kannada Bible (KNCL) BSI 2016
ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.