Revelation 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
Kannada BSI Bible 2016
ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.
Kannada Bible (KNCL) BSI 2016
ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.