Revelation 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
Kannada BSI Bible 2016
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.
Kannada Bible (KNCL) BSI 2016
ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ: ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.