Revelation 22:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
Kannada BSI Bible 2016
ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ನನಗೆ - ಈ ಪುಸ್ತಕದಲ್ಲಿರುವ ಪ್ರವಾದನವಾಕ್ಯಗಳನ್ನು ಗುಪ್ತವಾಗಿಡಬೇಡ; ಇವು ನೆರವೇರುವ ಸಮಯವು ಸಮೀಪವಾಗಿದೆ.
Kannada Bible (KNCL) BSI 2016
ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.