Revelation 22:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
Kannada BSI Bible 2016
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
Kannada Bible (KNCL) BSI 2016
“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.