Revelation 22:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”
Kannada BSI Bible 2016
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
Kannada Bible (KNCL) BSI 2016
“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.