Revelation 22:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.
Kannada BSI Bible 2016
ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು.
Kannada Bible (KNCL) BSI 2016
ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೂ ನಾನು ಕೊಡುವ ಎಚ್ಚರಿಕೆ ಇದು: “ಯಾವನಾದರೂ ಇವುಗಳಿಗೆ ಏನನ್ನಾದರೂ ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ವಿಪತ್ತುಗಳು ಬಂದೆರಗುವಂತೆ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.