Revelation 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
Kannada BSI Bible 2016
ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
Kannada Bible (KNCL) BSI 2016
ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.