Revelation 22:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.
Kannada BSI Bible 2016
ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್‌. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.
Kannada Bible (KNCL) BSI 2016
ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.