Revelation 22:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.
Kannada BSI Bible 2016
ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು.
Kannada Bible (KNCL) BSI 2016
ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.