Revelation 22:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗ ಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
Kannada BSI Bible 2016
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
Kannada Bible (KNCL) BSI 2016
ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.