Revelation 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವು ಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
Kannada BSI Bible 2016
ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ನನಗೆ - ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ; ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತಿಳಿಯಪಡಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿಕೊಟ್ಟನು.
Kannada Bible (KNCL) BSI 2016
ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.