Revelation 22:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕೇಳಿರಿ! ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.
Kannada BSI Bible 2016
ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.
Kannada Bible (KNCL) BSI 2016
“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.