Revelation 22:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
Kannada BSI Bible 2016
ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳನ್ನು ಕೇಳಿ ಕಂಡವನು ಯೋಹಾನನೆಂಬ ನಾನೇ. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಕ್ಕೆ ಬಿದ್ದೆನು.
Kannada Bible (KNCL) BSI 2016
ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.