Revelation 22:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
Kannada BSI Bible 2016
ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನನಗೆ - ಮಾಡಬೇಡ ನೋಡು; ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವವರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಎಂದು ಹೇಳಿದನು.
Kannada Bible (KNCL) BSI 2016
ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.