Revelation 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.
Kannada BSI Bible 2016
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.
Kannada Bible (KNCL) BSI 2016
“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.