Revelation 3:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
Kannada BSI Bible 2016
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.
Kannada Bible (KNCL) BSI 2016
ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.