Revelation 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Kannada BSI Bible 2016
ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Kannada Bible (KNCL) BSI 2016
ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.