Revelation 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,
Kannada BSI Bible 2016
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -
Kannada Bible (KNCL) BSI 2016
“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ: