Revelation 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಮಾಡುವುದೆಲ್ಲಾ ನನಗೆ ತಿಳಿದದೆ. ನೀನು ಬಿಸಿಯೂ ಇಲ್ಲ, ತಣ್ಣಗೂ ಇಲ್ಲ! ನೀನು ಬಿಸಿಯಾದರೂ ಇರಬೇಕಿತ್ತು ಅಥವಾ ತಣ್ಣಗಾದರೂ ಇರಬೇಕಿತ್ತು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.
Kannada BSI Bible 2016
ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೃತ್ಯಗಳನ್ನು ಬಲ್ಲೆನು; ನೀನು ತಣ್ಣಗೂ ಅಲ್ಲ, ಬೆಚ್ಚಗೂ ಅಲ್ಲ; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದರೆ ಒಳ್ಳೇದಾಗಿತ್ತು.
Kannada Bible (KNCL) BSI 2016
ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನೀನು ತಣ್ಣಗೂ ಇಲ್ಲ, ಬಿಸಿಯೂ ಇಲ್ಲ, ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.