Revelation 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.
Kannada BSI Bible 2016
ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಚ್ಚರವಾಗಿರು; ಸಾಯುವ ಹಾಗಿದ್ದ ಉಳಿದವುಗಳನ್ನು ದೃಢಪಡಿಸು. ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಸಂಪೂರ್ಣವಾದದ್ದೆಂದು ನಾನು ಕಾಣಲಿಲ್ಲ.
Kannada Bible (KNCL) BSI 2016
ಎಚ್ಚೆತ್ತು ನಿನ್ನಲ್ಲಿ ಉಳಿದಿರುವುಗಳನ್ನು ಉತ್ತೇಜನಗೊಳಿಸು; ಅವು ಸಾವಿನ ದವಡೆಯಲ್ಲಿವೆ. ನನ್ನ ದೇವರ ದೃಷ್ಟಿಯಲ್ಲಿ ನಿನ್ನ ಕೃತ್ಯಗಳು ಯಾವುವೂ ಸಮಗ್ರವಾಗಿರುವುದು ನನಗೆ ಕಂಡುಬಂದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳು ನನಗೆ ಪರಿಪೂರ್ಣವಾಗಿ ಕಂಡುಬರಲಿಲ್ಲ.