Revelation 3:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
Kannada BSI Bible 2016
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.
Kannada Bible (KNCL) BSI 2016
ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.