Revelation 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
Kannada BSI Bible 2016
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.
Kannada Bible (KNCL) BSI 2016
ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.