Revelation 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
Kannada BSI Bible 2016
ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
Kannada Bible (KNCL) BSI 2016
ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.