Revelation 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
Kannada BSI Bible 2016
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.
Kannada Bible (KNCL) BSI 2016
ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.