Revelation 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
Kannada BSI Bible 2016
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -
Kannada Bible (KNCL) BSI 2016
“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ: