Revelation 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
Kannada BSI Bible 2016
ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೃತ್ಯಗಳನ್ನು ಬಲ್ಲೆನು; ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನಗೆ ಸೇರಿದವನಲ್ಲವೆಂದು ಹೇಳದೆ ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ, ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ; ಯಾರೂ ಅದನ್ನು ಮುಚ್ಚಲಾರರು.
Kannada Bible (KNCL) BSI 2016
ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು.