Revelation 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.
Kannada BSI Bible 2016
ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.
Kannada Bible (KNCL) BSI 2016
ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.